Sunday, December 1, 2013

ಕಟೀಲು ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕಟೀಲು : ನಮ್ಮ ಪುರಾಣ, ಇತಿಹಾಸ, ಸಂಸ್ಕೃತಿಗಳನ್ನು ಮಕ್ಕಳಿಗೆ ತಿಳಿಸುವ ಜೊತೆಗೆ ಸಂಸ್ಕಾರವಂತರನ್ನಾಗಿ ರೂಪಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಕಟೀಲು ದೇವಳದ ಅರ್ಚಕ ಕಮಲದೇವಿ ಪ್ರಸಾದ ಆಸ್ರಣ್ಣ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಬಜಪೆ ವ್ಯವಸಾಯ ಸೇವಾ ಸಹಕಾರಿ ಸಂಘ ಬ್ಯಾಂಕ್ ಪ್ರಬಂಧಕ ರತ್ನಾಕರ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕಿ ಜಲಜ.ಎಸ್, ಮೆನ್ನಬೆಟ್ಟು ಪಂ.ಅಧ್ಯಕ್ಷ ಜನಾರ್ದನ ಕಿಲೆಂಜೂರು, ಶಾಲೆಯ ಹಳೆ ವಿದ್ಯಾರ್ಥಿಗಳಾದ ಕಿರಣ್ ಶೆಟ್ಟಿ, ಕಲ್ಪೇಶ್ ಶೆಟ್ಟಿ, ಉಲ್ಲಂಜೆ ಮತ್ತು ಪದ್ಮನೂರು ಕ್ಲಸ್ಟರ್ ಸಿ.ಆರ್.ಪಿ. ಜಗದೀಶ್ ನಾವಡ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವೆಂಕಟರಮಣ ಹೆಗ್ಡೆ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕರಾದ ಸರೋಜಿನಿ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕಿ ವೈ ಮಾಲತಿ ವಾರ್ಷಿಕ ವರದಿ ನೀಡಿದರು. ವಾಸುದೇವ ಶೆಣೈ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment