Wednesday, November 5, 2014

ಕಟೀಲಿನಲ್ಲಿ ತಾಲೂಕು ಪ್ರತಿಭಾ ಕಾರಂಜಿ ಭ್ರಮರ

ಗ್ರಾಮೀಣ ಪ್ರತಿಭೆಗಳಿಗೆ ಪೂರಕ -ನಳಿನ್ ಕುಮಾರ್
ಕಟೀಲು : ಕಲಾ ಪ್ರತಿಭೆಗಳಿಗೆ ಪ್ರೋತ್ಸಾಹ ನಗರಪ್ರದೇಶದಲ್ಲಷ್ಟೇ ಅಲ್ಲ, ಗ್ರಾಮೀಣ ಪ್ರದೇಶದಲ್ಲೂ ಸಿಗುವಂತಾಗಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪ್ರಮುಖವಾಗಿವೆ ಎಂದು ಸಾಂಸದ ನಳಿನ್ ಕುಮಾರ್ ಹೇಳಿದರು.
ಸೋಮವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಸಂಯುಕ್ತ ಪದವೀಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ’ಭ್ರಮರ’ವನ್ನು ಉದ್ಟಾಟಿಸಿ ಮಾತನಾಡಿದರು.
ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ, ಕಟೀಲು ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಜಿ.ಪಂ.ಸದಸ್ಯ ಈಶ್ವರ ಕಟೀಲ್, ಆಶಾ ಸುವರ್ಣ, ತಾಂಪಂ.ಸದಸ್ಯೆ ಬೇಬಿ ಕೋಟ್ಯಾನ್, ಪ್ರೌಢಶಾಲೆಯ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರಘುನಾಥ್, ಕ್ಷೇತ್ರ ಸಮನ್ವಯಾಧಿಕಾರಿ ಪೀತಾಂಬರ, ಕಟೀಲು ಶಿಕ್ಷಣ ಸಂಸ್ಥೆಗಳ ಪ್ರಮುಖರಾದ ಎಂ.ಬಾಲಕೃಷ್ಣ ಶೆಟ್ಟಿ, ಜಯರಾಮ ಪೂಂಜಾ, ಮಾಲತಿ ವೈ ಮತ್ತಿತರರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಸ್ವಾಗತಿಸಿದರು. ಉಪಪ್ರಾಚಾರ್ಯ ಕೆ.ವಿ.ಶೆಟ್ಟಿ ವಂದಿಸಿದರು. ಸಾಯಿನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ೧೪೭ಶಾಲೆಗಳ ವಿದ್ಯಾ ೧೦೯೩ಸ್ಪರ್ಧಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.


No comments:

Post a Comment