Wednesday, July 1, 2015

ಕಟೀಲು ಕಾಲೇಜು ಎನ್‌ಎಸ್‌ಎಸ್ ಉದ್ಘಾಟನೆ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೇ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ಈ ಸಾಲಿನ ಚಟುವಟಿಕೆಗಳ ಉದ್ಘಾಟನೆಯನ್ನು ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡುವ ಮೂಲಕ ಕೆಂಚನಕೆರೆಯ ಯೋಗಸಾಧಕ ಜಯ ಶೆಟ್ಟಿಯವರು ಉದ್ಘಾಟಿಸಿದರು.
ಯೋಗದಿಂದ ಅನಾರೋಗ್ಯವನ್ನು ದೂರಮಾಡಬಹುದು. ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುವುದಕ್ಕಾಗಿ ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕೆಂದು ಜಯ ಶೆಟ್ಟಿ ಹೇಳಿದರು.
ಪ್ರಾಚಾರ್ಯ ಎಂ. ಬಾಲಕೃಷ್ಣ ಶೆಟ್ಟಿ, ಕಿನ್ನಿಗೋಳಿಯ ಉದ್ಯಮಿ ಶ್ರೀಕಾಂತ್, ಎನ್‌ಎಸ್‌ಎಸ್ ಯೋಜನಾಧಿಕಾರಿ ಕೃಷ್ಣ ಕಾಂಚನ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯದರ್ಶಿಗಳಾದ ಪವಿತ್ರ ಕಾರ‍್ಯಕ್ರಮ ನಿರೂಪಿಸಿದರು. ಯಶ್ವಿತಾ ವಂದಿಸಿದರು.


No comments:

Post a Comment