ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಹೋಬಳಿ ಮಟ್ಟ, ತಾಲೂಕು ಮಟ್ಟ ಹಾಗೂ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ಬ್ರಹ್ಮಾವರದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಅನುದಾನಿತ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಗಳಾದ ಜಯಲಕ್ಷ್ಮೀ, ಗೀತಾ, ಸುಪ್ರೀತಾ ಆಯ್ಕೆಯಾಗಿದ್ದಾರೆ. ವೈಯಕ್ತಿಕ ವಿಭಾಗದಲ್ಲಿ ಜಯಲಕ್ಷ್ಮೀ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ 200 ಮೀ, 400 ಮೀ, 600 ಮೀ ಹಾಗೂ 4×100 ಮೀಗಳಲ್ಲಿ ಚಿನ್ನ ಮತ್ತು ವೈಯಕಿಕ ಚಾಂಪಿಯನ್ ಶಿಪ್‌ನೊಂದಿಗೆ ಬ್ರಹ್ಮಾವರದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
No comments:
Post a Comment